ಪುತ್ತೂರು: ಹಿಂದೂ ಸಂಘಟನೆಯ ಪ್ರಮುಖ ಮುಖಂಡರಾದ ಅಜಿತ್ ರೈ ಹೊಸಮನೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರು ಮಾಡುವ ಕುರಿತಾದ ಪ್ರಸ್ತಾವನೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ. ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ಹೊಸಮನೆ ನಿವಾಸಿಯಾಗಿರುವ ಅಜಿತ್ ರೈ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 55ರ ಅಡಿಯಲ್ಲಿ ಕ್ರಮ ಕೈಗೊಳ್ಳುವಂತೆ ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕರು ವರದಿ ಸಲ್ಲಿಸಿದ್ದರು. ಈ ಪ್ರಸ್ತಾವನೆಯನ್ನು ಆಧರಿಸಿ ಗಡಿಪಾರು ಆದೇಶ ಹೊರಡಿಸುವ ಪ್ರಕ್ರಿಯೆಯ ಭಾಗವಾಗಿ ಈ ನೋಟಿಸ್ ನೀಡಲಾಗಿದೆ.
ಈ ಗಡಿಪಾರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಯು ಪುತ್ತೂರು ಸಹಾಯಕ ಆಯುಕ್ತರ ನ್ಯಾಯಾಲಯದ ಸಭಾಂಗಣದಲ್ಲಿ ಫೆಬ್ರವರಿ 25ರಂದು ನಡೆಯಲಿದೆ. ಅಜಿತ್ ರೈ ಅವರು ಅಂದು ವೈಯಕ್ತಿಕವಾಗಿ ಅಥವಾ ತಮ್ಮ ಪರ ನ್ಯಾಯವಾದಿಗಳ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿ ತಮ್ಮ ವಾದವನ್ನು ಮಂಡಿಸಲು ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ನಿಗದಿತ ಸಮಯದಲ್ಲಿ ವಿಚಾರಣೆಗೆ ಹಾಜರಾಗಲು ವಿಫಲರಾದಲ್ಲಿ, ಪ್ರಕರಣದಲ್ಲಿ ಅವರಿಗೆ ಆಸಕ್ತಿ ಇಲ್ಲವೆಂದು ಪರಿಗಣಿಸಿ ಲಭ್ಯವಿರುವ ಪೊಲೀಸ್ ವರದಿ ಹಾಗೂ ಮಾಹಿತಿಗಳ ಆಧಾರದ ಮೇಲೆ ಏಕಪಕ್ಷೀಯವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ನೋಟಿಸ್ನಲ್ಲಿ ಸ್ಪಷ್ಟಪಡಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









