ಮಂಗಳೂರು : ನಗರದಲ್ಲಿ ಪದೇ ಪದೇ ನಡೆಯುವ ರಸ್ತೆ ಪ್ರತಿಭಟನೆಗಳಿಂದಾಗಿ ಸಂಚಾರ ವ್ಯವಸ್ಥೆ ಸಂಪೂರ್ಣ ಅಸ್ತವ್ಯಸ್ತಗೊಳ್ಳುತ್ತಿದ್ದು, ಇದು ಬಸ್ ಚಾಲಕರ ಪಾಲಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಕಳೆದ ನಾಲ್ಕು ವರ್ಷಗಳಿಂದ ಬಸ್ ಚಾಲನೆ ಮಾಡುತ್ತಿರುವ ನೀತು ಬಸ್ಸ್ ಚಾಲಕ ಈ ಬಗ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ರಸ್ತೆಯ ಮಧ್ಯೆ ಪ್ರತಿಭಟನೆ ನಡೆಸುವುದರಿಂದ ತೀವ್ರ ಟ್ರಾಫಿಕ್ ಜಾಮ್ ಉಂಟಾಗುತ್ತಿದ್ದು, ನಿಗದಿತ ಸಮಯಕ್ಕೆ ಸರಿಯಾಗಿ ಬಸ್ ನಿಲ್ದಾಣ ತಲುಪಲು ಸಾಧ್ಯವಾಗುತ್ತಿಲ್ಲ. ಇದು ಪ್ರಯಾಣಿಕರ ಅಸಮಾಧಾನಕ್ಕೂ ಕಾರಣವಾಗುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.
ಒಂದೆಡೆ ಟ್ರಾಫಿಕ್ ಕಿರಿಕಿರಿ ತಪ್ಪಿಸಲು ಪರ್ಯಾಯ ರಸ್ತೆಗಳಲ್ಲಿ ಹೋದರೆ ಪೊಲೀಸರು ದಂಡ ವಿಧಿಸುತ್ತಾರೆ, ಇನ್ನೊಂದೆಡೆ ನಗರದ ರಸ್ತೆಗಳ ಸ್ಥಿತಿ ಶೋಚನೀಯವಾಗಿದೆ. ರಸ್ತೆಯಲ್ಲಿರುವ ಬೃಹತ್ ಗುಂಡಿಗಳು ಹಾಗೂ ಕೇಬಲ್ ಅಳವಡಿಕೆಯ ಹೆಸರಿನಲ್ಲಿ ನಡೆಸಲಾಗುತ್ತಿರುವ ಅವೈಜ್ಞಾನಿಕ ರಸ್ತೆ ಅಗೆತದಿಂದಾಗಿ ಬಸ್ ಚಲಾಯಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಸಾರ್ವಜನಿಕ ರಸ್ತೆಗಳಲ್ಲಿ ಪ್ರತಿಭಟನೆ ನಡೆಸಲು ಅವಕಾಶ ನೀಡಬಾರದು ಮತ್ತು ಸಂಚಾರಕ್ಕೆ ಮುಕ್ತವಾದ ದಾರಿ ಮಾಡಿಕೊಡಬೇಕೆಂದು ಅವರು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









