ಬೆಳ್ತಂಗಡಿ : ಇತಿಹಾಸ ಪ್ರಸಿದ್ಧ ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಶ್ರೀ ಮನ್ಮಹಾರಥೋತ್ಸವದ ಅಂಗವಾಗಿ ಫೆಬ್ರವರಿ 19ರ ಗುರುವಾರದಂದು ಸಾಂಸ್ಕೃತಿಕ ಸಂಭ್ರಮ ಮೇಳೈಸಿತು. ಈ ಸುಸಂದರ್ಭದಲ್ಲಿ ಮಂಗಳೂರಿನ ಪ್ರಖ್ಯಾತ ‘ಮಕ್ಕಿಮನೆ ಕಲಾವೃಂದ’ ಬಳಗದಿಂದ ಜರಗಿದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಭಕ್ತಾದಿಗಳ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾದವು. ಕಲೆ ಮತ್ತು ಭಕ್ತಿಯ ಸಂಗಮದಂತಿದ್ದ ಈ ಪ್ರದರ್ಶನವು ನೆರೆದಿದ್ದ ಪ್ರೇಕ್ಷಕರಿಂದ ಅಪಾರ ಮೆಚ್ಚುಗೆಗೆ ಪಾತ್ರವಾಯಿತು.
ಈ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಅವರು ತಮ್ಮ ಸಹೋದರ-ಸಹೋದರಿಯರು ಹಾಗೂ ಕುಟುಂಬಸ್ಥರೊಂದಿಗೆ ಪಾಲ್ಗೊಂಡಿದ್ದರು. ದೇವಸ್ಥಾನದ ಆವರಣದಲ್ಲಿ ನಡೆದ ಈ ಸಂಭ್ರಮಕ್ಕೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಸಾಕ್ಷಿಯಾಗಿ, ದೇವರ ಕೃಪೆಗೆ ಪಾತ್ರರಾದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









