ಮಂಗಳೂರು : ನಗರದ ಬಾಬುಗುಡ್ಡ ಎಂಬಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಅನೈತಿಕ ಪೊಲೀಸ್ಗಿರಿ ನಡೆಸಿದ ಆರೋಪದಡಿ ಸ್ಟೀವನ್ ಮೊಂತೇರೋ ಮತ್ತು ಆತನ ಪುತ್ರ ಅವಿಲ್ ಎಂಬುವವರನ್ನು ಪಾಂಡೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ರೈಲ್ವೆ ಹಳಿ ಸಮೀಪ ಕುಳಿತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯನ್ನು ತಡೆದ ಆರೋಪಿಗಳು, ಅವರ ವೀಡಿಯೋ ಚಿತ್ರೀಕರಿಸಿದ್ದಲ್ಲದೆ ಅನಗತ್ಯವಾಗಿ ಪ್ರಶ್ನಿಸಿ ಕಿರುಕುಳ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಘಟನೆಯ ಸಂದರ್ಭದಲ್ಲಿ ಆರೋಪಿಗಳು ವಿದ್ಯಾರ್ಥಿಯ ಮೇಲೆ ದೈಹಿಕವಾಗಿ ಹಲ್ಲೆ ನಡೆಸಿದ್ದಲ್ಲದೆ, ಜಾತಿ ನಿಂದನೆ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ತಕ್ಷಣ ಕಾರ್ಯಪ್ರವೃತ್ತರಾದ ಪಾಂಡೇಶ್ವರ ಪೊಲೀಸರು ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮಗಳನ್ನು ಕೈಗೊಂಡಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









