ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ವತಿಯಿಂದ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳನ್ನು ವಿತರಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮವು ಮಹಿಳೆಯರನ್ನು ಆರ್ಥಿಕವಾಗಿ ಸಬಲಗೊಳಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗಿದೆ.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್ ಅವರು, ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿ ಮಾಡುವುದೇ ಈ ಯೋಜನೆಯ ಮೂಲ ಆಶಯವಾಗಿದೆ ಎಂದು ತಿಳಿಸಿದರು. ಸಮಾಜದಲ್ಲಿ ಮಹಿಳೆಯರು ಆರ್ಥಿಕವಾಗಿ ಸದೃಢರಾದಾಗ ಮಾತ್ರ ದೇಶದ ಪ್ರಗತಿ ಸಾಧ್ಯ. ಈ ನಿಟ್ಟಿನಲ್ಲಿ ಸರಕಾರ ಮತ್ತು ನಿಗಮಗಳು ನೀಡುವ ಇಂತಹ ಸೌಲಭ್ಯಗಳನ್ನು ಅರ್ಹರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಹೊಲಿಗೆ ಯಂತ್ರ ಪಡೆದ ಫಲಾನುಭವಿಗಳಿಗೆ ಶುಭ ಹಾರೈಸಿದ ಶಾಸಕರು, ಮಹಿಳೆಯರು ತಮ್ಮ ಜೀವನ ಮಟ್ಟವನ್ನು ಸುಧಾರಿಸಿಕೊಳ್ಳಲು ಇದು ಪೂರಕವಾಗಲಿದೆ ಎಂದರು. ಮನೆಯಲ್ಲೇ ಇದ್ದುಕೊಂಡು ಹೊಲಿಗೆ ಕೆಲಸ ಮಾಡುವ ಮೂಲಕ ಕುಟುಂಬ ನಿರ್ವಹಣೆಗೆ ನೆರವಾಗಬಹುದು ಹಾಗೂ ಗೌರವಯುತ ಸ್ವಾವಲಂಬಿ ಜೀವನ ನಡೆಸಬಹುದು. ಈ ಉಪಕ್ರಮವು ಹೆಚ್ಚಿನ ಮಹಿಳೆಯರಿಗೆ ಸ್ಫೂರ್ತಿಯಾಗಲಿ ಎಂದು ಅವರು ಹಾರೈಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









