ಮಂಗಳೂರು : ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಗೋದಾಮಿನ ಮೇಲೆ ಬಂದರು ಪೊಲೀಸರು ದಾಳಿ ನಡೆಸಿದ್ದು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂದಿತರನ್ನು ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಎಂದು ಗುರುತಿಸಲಾಗಿದ್ದು, ಇವರು ಯಾವುದೇ ಸುರಕ್ಷತಾ ಕ್ರಮಗಳಿಲ್ಲದೆ ಸಾರ್ವಜನಿಕರ ಜೀವಕ್ಕೆ ಅಪಾಯಕಾರಿಯಾಗುವಂತೆ ಗ್ಯಾಸ್ ಸಿಲಿಂಡರ್ಗಳ ದಂಧೆಯಲ್ಲಿ ತೊಡಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಮಾರ್ಚ್ 17ರಂದು ಮಧ್ಯಾಹ್ನ ಸುಮಾರು 1:30ರ ಸುಮಾರಿಗೆ ನಗರದ ನ್ಯೂಚಿತ್ರಾ ಜಂಕ್ಷನ್ ಬಳಿಯ ಬಸವನಗುಡಿ ಲಕ್ಷ್ಮೀನಾರಾಯಣ ದೇವಸ್ಥಾನದ ರಸ್ತೆಯಲ್ಲಿರುವ ಗೋದಾಮೊಂದರಲ್ಲಿ ಈ ಕೃತ್ಯ ನಡೆಯುತ್ತಿತ್ತು. ದೊಡ್ಡ ಅಡುಗೆ ಅನಿಲ ಹಂಡೆಗಳಿಂದ ಸಣ್ಣ ಹಂಡೆಗಳಿಗೆ ಅಕ್ರಮವಾಗಿ ಗ್ಯಾಸ್ ವರ್ಗಾಯಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ದಾಳಿಯ ಸಂದರ್ಭದಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ ಗ್ಯಾಸ್ ಸಿಲಿಂಡರ್ಗಳು ಹಾಗೂ ಮರುಪೂರಣಕ್ಕೆ ಬಳಸುತ್ತಿದ್ದ ಪರಿಕರಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಕುರಿತು ಮಂಗಳೂರಿನ ಬಂದರು ಪೊಲೀಸ್ ಠಾಣೆಯಲ್ಲಿ ಕಾನೂನು ರೀತ್ಯಾ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









