ಮಂಗಳೂರು : ಕೇರಳ ರಾಜ್ಯದ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದು, ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಲು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೇರಳಕ್ಕೆ ಭೇಟಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯಮಂತ್ರಿಯವರನ್ನು ಗಣ್ಯರು ಹಾಗೂ ಪಕ್ಷದ ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ವಿಮಾನ ನಿಲ್ದಾಣದಲ್ಲಿ ಯಾವುದೇ ಮಾಧ್ಯಮ ಪ್ರತಿಕ್ರಿಯೆಗಳನ್ನು ನೀಡದ ಮುಖ್ಯಮಂತ್ರಿಯವರು, ಅಲ್ಲಿಂದ ನೇರವಾಗಿ ರಸ್ತೆ ಮಾರ್ಗದ ಮೂಲಕ ಕೇರಳದತ್ತ ಪ್ರಯಾಣ ಬೆಳೆಸಿದರು.
ಮುಖ್ಯಮಂತ್ರಿಯವರು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ವರ್ಕಾಡಿಗೆ ತೆರಳಿದ್ದು, ಅಲ್ಲಿ ಆಯೋಜಿಸಲಾಗಿರುವ ಬೃಹತ್ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ (UDF) ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಅವರ ಪರವಾಗಿ ಸಿದ್ದರಾಮಯ್ಯ ಅವರು ಈ ಭೇಟಿಯಲ್ಲಿ ಮತಯಾಚನೆ ಮಾಡಲಿದ್ದಾರೆ. ಗಡಿ ಭಾಗದ ಮತದಾರರ ಮೇಲೆ ಪ್ರಭಾವ ಬೀರಲು ಸಿದ್ದರಾಮಯ್ಯ ಅವರ ಈ ಭೇಟಿಯು ಕಾಂಗ್ರೆಸ್ ಮತ್ತು ಯುಡಿಎಫ್ ಮೈತ್ರಿಕೂಟಕ್ಕೆ ಪ್ರಮುಖವೆಂದು ಪರಿಗಣಿಸಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









