ಮಂಗಳೂರು: ಫಳ್ನೀರ್ ಬಳಿ ಇರುವ ಪ್ರಸಿದ್ಧ ‘ಟೋಪಾಜ್ ಕಾರ್ ಸೆಂಟರ್’ ಎಂಬ ಕಾರ್ ಮಾಡಿಫಿಕೇಷನ್ ಸಂಸ್ಥೆಯಲ್ಲಿ ಇಂದು ಮುಂಜಾನೆ ಭೀಕರ ಬೆಂಕಿ ಅವಘಡ ಸಂಭವಿಸಿದೆ. ಬೆಳಗಿನ ಜಾವ ಸುಮಾರು 5 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಶಾರ್ಟ್ ಸರ್ಕಿಟ್ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕವಾಗಿ ಅಂದಾಜಿಸಲಾಗಿದೆ. ಈ ಸಂಸ್ಥೆಯು ಮಾಜಿ ಶಾಸಕ ಮೊಯ್ದೀನ್ ಬಾವಾ ಅವರ ತಂಗಿಯ ಮಗ ಸಿಯಾಜ್ ಅವರಿಗೆ ಸೇರಿದ್ದಾಗಿದೆ.
ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಗ್ಯಾರೇಜ್ನಲ್ಲಿದ್ದ ಎರಡು ಐಷಾರಾಮಿ BMW ಕಾರುಗಳು ತೀವ್ರವಾಗಿ ಹಾನಿಗೊಳಗಾಗಿದ್ದು, ಅಪಾರ ಪ್ರಮಾಣದ ಸ್ವತ್ತು ನಾಶವಾಗಿದೆ. ಘಟನಾ ಸ್ಥಳಕ್ಕೆ ತಕ್ಷಣ ಧಾವಿಸಿದ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಅಕ್ಕಪಕ್ಕದ ಕಟ್ಟಡಗಳಿಗೆ ಹಾಗೂ ಹೆಚ್ಚಿನ ಹಾನಿಯಾಗುವುದು ತಪ್ಪಿದಂತಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









