ಬೆಳ್ತಂಗಡಿ: ಕೊಲ್ಪೆದಬೈಲು ಎಂಬಲ್ಲಿ ಭಾನುವಾರ ಮಧ್ಯಾಹ್ನ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಅತಿ ವೇಗವಾಗಿ ಬಂದ ಮಾರುತಿ ಓಮ್ನಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗಳ ಮೇಲೆ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಓರ್ವ ಮಹಿಳೆ ಕಾರಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದು, ಉಳಿದವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಅಪಘಾತದ ಸಮಯದಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳು ರಸ್ತೆಯ ಬದಿಯಲ್ಲಿ ಸಾಗುತ್ತಿದ್ದರು. ತಿರುವಿನಲ್ಲಿ ವೇಗವಾಗಿ ಬಂದ ಕಾರು ಅನಿರೀಕ್ಷಿತವಾಗಿ ನಿಯಂತ್ರಣ ತಪ್ಪಿ ಇವರ ಮೇಲೆ ಉರುಳಿ ಬಿದ್ದಿದೆ. ಪವಾಡಸದೃಶ ಎಂಬಂತೆ ಮಕ್ಕಳಿಬ್ಬರು ಮತ್ತು ಮತ್ತೋರ್ವ ಮಹಿಳೆ ಯಾವುದೇ ಗಾಯಗಳಿಲ್ಲದೆ ಬದುಕುಳಿದಿದ್ದಾರೆ. ತಕ್ಷಣವೇ ಕಾರ್ಯಪ್ರವೃತ್ತರಾದ ಸ್ಥಳೀಯರು ಕಾರಿನಡಿ ಸಿಲುಕಿದ್ದ ಮಹಿಳೆಯನ್ನು ಹೊರತೆಗೆದು ಬೆಳ್ತಂಗಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಈ ಎದೆನಡುಗಿಸುವ ಅಪಘಾತದ ದೃಶ್ಯಗಳು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









