ಐದು ರಾಜ್ಯಗಳ ಚುನಾವಣೆಯ ಸಂದರ್ಭದಲ್ಲಿ ಕೇಂದ್ರ ಸರ್ಕಾರವು ವಿಶೇಷ ಅಧಿವೇಶನವನ್ನು ಕರೆದಿರುವುದು ಸಂಪೂರ್ಣವಾಗಿ ರಾಜಕೀಯ ಪ್ರೇರಿತವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಟೀಕಿಸಿದ್ದಾರೆ. ಈಗಾಗಲೇ ತೀರ್ಮಾನವಾಗಿರುವ ಶೇ. 33ರಷ್ಟು ಮಹಿಳಾ ಮೀಸಲಾತಿಯನ್ನು ಜಾರಿಗೆ ತರುತ್ತಿರುವುದು ಸ್ವಾಗತಾರ್ಹವಾದರೂ, ಇದರ ಹಿಂದಿನ ರಾಜಕೀಯ ಉದ್ದೇಶಗಳನ್ನು ಅವರು ಪ್ರಶ್ನಿಸಿದ್ದಾರೆ. ಈ ಹಿಂದೆ 2010ರಲ್ಲಿ ಡಾ. ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಮಹಿಳಾ ಮೀಸಲಾತಿ ಪ್ರಸ್ತಾವನೆಯನ್ನು ಮುಂದಿಟ್ಟಿದ್ದರು. ಆದರೆ ಅಂದು ಇದೇ ಬಿಜೆಪಿ ನಾಯಕರು ಆ ಯೋಜನೆಯನ್ನು ವಿರೋಧಿಸಿದ್ದರು ಎಂಬುದನ್ನು ಅವರು ನೆನಪಿಸಿದ್ದಾರೆ.
ಸದ್ಯ ಜಾರಿಗೆ ತರಲು ಉದ್ದೇಶಿಸಿರುವ ಮೀಸಲಾತಿಯು ಜನಗಣತಿ ಮತ್ತು ಕ್ಷೇತ್ರ ವಿಂಗಡನೆಯ ಆಧಾರದ ಮೇಲೆ ನಿಂತಿರುವುದು ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕ್ಷೇತ್ರ ವಿಂಗಡನೆಯನ್ನು ಆಧಾರವಾಗಿಟ್ಟುಕೊಂಡು ಮೀಸಲಾತಿ ಹಂಚಿಕೆ ಮಾಡುವುದರಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಭಾರಿ ಹಿನ್ನಡೆಯಾಗಲಿದೆ. ಪ್ರಮುಖವಾಗಿ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಿಗೆ ಈ ಪ್ರಕ್ರಿಯೆಯಿಂದ ಅನ್ಯಾಯವಾಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









