ಮಂಗಳೂರು : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಪಜೀರು ಗ್ರಾಮದ ಅಡ್ಕ ನಿವಾಸಿ ಜಗದೀಶ್ ಎಂಬವರ ಪುತ್ರಿ ಚೈತನ್ಯ (16) ಎಂಬ ಬಾಲಕಿ ನಾಪತ್ತೆಯಾಗಿದ್ದಾಳೆ. ಈಕೆ ಹರೇಕಳದ ರಾಮಕೃಷ್ಣ ಪ್ರೌಢಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದು, ಇತ್ತೀಚೆಗಷ್ಟೇ ಪರೀಕ್ಷೆ ಮುಗಿಸಿ ಮನೆಯಲ್ಲಿ ವಿಶ್ರಾಂತಿಯಲ್ಲಿದ್ದಳು. ಏಪ್ರಿಲ್ 12ರಂದು ಬೆಳಿಗ್ಗೆ ತನ್ನ ಸ್ನೇಹಿತರೊಂದಿಗೆ ಪೊಳಲಿ ಜಾತ್ರೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟಿದ್ದ ಬಾಲಕಿ, ರಾತ್ರಿಯಾದರೂ ಹಿಂದಿರುಗದೆ ನಾಪತ್ತೆಯಾಗಿದ್ದಾಳೆ.
ಬಾಲಕಿ ಮನೆಗೆ ಬಾರದೆ ಇದ್ದುದರಿಂದ ಆತಂಕಗೊಂಡ ಪೋಷಕರು ಮತ್ತು ಸಂಬಂಧಿಕರು ಆಕೆಯ ಸ್ನೇಹಿತರ ಮನೆ ಹಾಗೂ ಇತರ ಪರಿಚಯಸ್ಥರ ಸ್ಥಳಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ. ಎಲ್ಲೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಕುಟುಂಬದವರು ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದು, ಬಾಲಕಿಯ ಪತ್ತೆಗಾಗಿ ಸಾರ್ವಜನಿಕರ ನೆರವು ಕೋರಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದಾರೆ. ಸಾರ್ವಜನಿಕರಿಗೆ ಈಕೆಯ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ತಕ್ಷಣವೇ ಸ್ಥಳೀಯ ಪೊಲೀಸರಿಗೆ ತಿಳಿಸಲು ಕೋರಲಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









