ಮಂಗಳೂರು : ಪಕ್ಷಾಂತರ ನಿಷೇಧ ತಿದ್ದುಪಡಿ ಕಾಯ್ದೆಯನ್ನು ಕಾಲಕ್ಕೆ ತಕ್ಕಂತೆ ಮೌಲ್ಯಮಾಪನ ಮಾಡಲು ಮತ್ತು ಅದನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಲೋಕಸಭಾ ಸ್ಪೀಕರ್ ಅವರು ನೇಮಿಸಿರುವ ಐದು ರಾಜ್ಯಗಳ ವಿಧಾನಸಭಾ ಅಧ್ಯಕ್ಷರ ಮಹತ್ವದ ಸಮಿತಿ ಸಭೆಯು ಏಪ್ರಿಲ್ 22 ಮತ್ತು 23ರಂದು ಒಡಿಶಾದ ಭುವನೇಶ್ವರದಲ್ಲಿ ನಡೆಯಲಿದೆ ಎಂದು ಕರ್ನಾಟಕ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಈ ಪ್ರಕ್ರಿಯೆಯ ಭಾಗವಾಗಿ ಈಗಾಗಲೇ ಮುಂಬೈನಲ್ಲಿ ಮೊದಲ ಹಂತದ ಸಭೆ ನಡೆದಿದ್ದು, ಇದೀಗ ಭುವನೇಶ್ವರದಲ್ಲಿ ಎರಡನೇ ಸಭೆ ಆಯೋಜಿತವಾಗಿದೆ. ಈ ಉನ್ನತ ಮಟ್ಟದ ಸಭೆಯಲ್ಲಿ ಕರ್ನಾಟಕ ಸೇರಿದಂತೆ ಒಡಿಶಾ, ಸಿಕ್ಕಿಂ, ಮಹಾರಾಷ್ಟ್ರ ಮತ್ತು ನಾಗಾಲ್ಯಾಂಡ್ ರಾಜ್ಯಗಳ ವಿಧಾನಸಭಾ ಅಧ್ಯಕ್ಷರು ಪಾಲ್ಗೊಂಡು ಕಾಯ್ದೆಯ ಸಾಧಕ-ಬಾಧಕಗಳ ಬಗ್ಗೆ ಸುದೀರ್ಘವಾಗಿ ಚರ್ಚಿಸಲಿದ್ದಾರೆ.
ಸದರಿ ಸಮಿತಿಯು ಪಕ್ಷಾಂತರ ತಡೆ ಕಾಯ್ದೆಗೆ ಸಂಬಂಧಿಸಿದಂತೆ ಸಮಗ್ರ ಅಧ್ಯಯನ ನಡೆಸಿ, ಅಗತ್ಯ ತಿದ್ದುಪಡಿಗಳ ಕುರಿತಾದ ವರದಿಯನ್ನು ಒಂದು ವರ್ಷದ ಕಾಲಮಿತಿಯೊಳಗೆ ಲೋಕಸಭಾ ಅಧ್ಯಕ್ಷರಿಗೆ ಸಲ್ಲಿಸಬೇಕಿದೆ ಎಂದು ಯು.ಟಿ. ಖಾದರ್ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









