ಉಡುಪಿ : ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ (ಯುಯುಡಿಎ) ನೂತನ ಆಯುಕ್ತರಾಗಿ ಕೆಎಂಎಎಸ್ ಅಧಿಕಾರಿ ಮಂಜುನಾಥ್ ಆರ್ ಅವರು ಏಪ್ರಿಲ್ 22 ರಂದು ಅಧಿಕೃತವಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಪ್ರಾಧಿಕಾರದಲ್ಲಿ ಕಳೆದ ಕೆಲವು ಸಮಯದಿಂದ ಖಾಲಿ ಇದ್ದ ಆಯುಕ್ತರ ಹುದ್ದೆಗೆ ಸರ್ಕಾರವು ಇವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು.
ನೂತನ ಆಯುಕ್ತ ಮಂಜುನಾಥ್ ಆರ್ ಅವರು ಜನಸ್ನೇಹಿ ಆಡಳಿತ ವೈಖರಿಗೆ ಹೆಸರುವಾಸಿಯಾದ ಅಧಿಕಾರಿಯಾಗಿದ್ದಾರೆ. ಇವರು ಈ ಹಿಂದೆ ಕಾರವಾರ, ಹಾವೇರಿ, ಯಾದಗಿರಿ, ಮಂಗಳೂರು, ಉಡುಪಿ ಮತ್ತು ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವೈವಿಧ್ಯಮಯ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ವಿವಿಧ ಜಿಲ್ಲೆಗಳಲ್ಲಿ ಕೆಲಸ ಮಾಡಿದ ಇವರ ಸುದೀರ್ಘ ಅನುಭವವು ಉಡುಪಿ ನಗರದ ಅಭಿವೃದ್ಧಿ ಕಾರ್ಯಗಳಿಗೆ ಪೂರಕವಾಗಲಿದೆ ಎಂದು ನಿರೀಕ್ಷಿಸಲಾಗಿದೆ. ಅಧಿಕಾರ ವಹಿಸಿಕೊಂಡ ನೂತನ ಆಯುಕ್ತರಿಗೆ ಪ್ರಾಧಿಕಾರದ ಸಿಬ್ಬಂದಿ ಹಾಗೂ ಗಣ್ಯರು ಶುಭ ಹಾರೈಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









