ಮಂಗಳೂರು : ಈ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಅಲಂಕರಿಸಿದ್ದು, ಈ ಅಮೋಘ ಸಾಧನೆಗಾಗಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪಾಲಕರಿಗೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಜಿಲ್ಲೆಯ ಶೈಕ್ಷಣಿಕ ಗುಣಮಟ್ಟವು ಮತ್ತೊಮ್ಮೆ ಸಾಬೀತಾಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯು ಶೈಕ್ಷಣಿಕ ಕ್ಷೇತ್ರದಲ್ಲಿ ಸದಾ ತನ್ನದೇ ಆದ ಘನತೆ ಮತ್ತು ಗೌರವವನ್ನು ಕಾಪಾಡಿಕೊಂಡು ಬಂದಿದೆ. ಇಲ್ಲಿನ ಶಿಕ್ಷಣ ವ್ಯವಸ್ಥೆಯು ಗುಣಮಟ್ಟದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿಲ್ಲ. ಈ ಶಿಸ್ತು ಮತ್ತು ಪರಿಶ್ರಮವೇ ಜಿಲ್ಲೆಯು ಶೈಕ್ಷಣಿಕ ಉತ್ತುಂಗದಲ್ಲಿ ಮುಂದುವರಿಯಲು ಕಾರಣವಾಗಿದೆ ಎಂದು ಸ್ಪೀಕರ್ ಯು.ಟಿ. ಖಾದರ್ ಅವರು ತಮ್ಮ ಅಭಿನಂದನಾ ಸಂದೇಶದಲ್ಲಿ ತಿಳಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮಾತನಾಡಿ, ದಕ್ಷಿಣ ಕನ್ನಡದ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಕಠಿಣ ಪರಿಶ್ರಮಕ್ಕೆ ಹೆಸರಾದವರು. ಈ ಬಾರಿಯ ಫಲಿತಾಂಶವು ಅವರ ಸಮರ್ಪಣಾ ಮನೋಭಾವಕ್ಕೆ ಸಿಕ್ಕ ಪ್ರತಿಫಲವಾಗಿದೆ. ಜಿಲ್ಲೆಯ ಶೈಕ್ಷಣಿಕ ಹಿರಿಮೆಯು ಇದೇ ರೀತಿ ಉನ್ನತ ಮಟ್ಟದಲ್ಲಿ ಮುಂದುವರಿಯುತ್ತಿರುವುದು ಶ್ಲಾಘನೀಯ ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









