ಧರ್ಮಸ್ಥಳ: ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಆಯೋಜಿಸಲಾಗಿರುವ 54ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭದ ಪೂರ್ವಭಾವಿಯಾಗಿ, ವಿವಾಹ ನೋಂದಣಿ ಕಚೇರಿಯನ್ನು ಉಜಿರೆಯ ಎಸ್.ಡಿ.ಎಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಯಿತು. ಎಸ್.ಡಿ.ಎಂ. ಧರ್ಮೋತ್ಥಾನ ಟ್ರಸ್ಟ್ನ ಕಾರ್ಯದರ್ಶಿಗಳಾದ ಎ.ವಿ. ಶೆಟ್ಟಿ ಅವರು ಕಚೇರಿಯನ್ನು ಉದ್ಘಾಟಿಸಿ, ಈ ಬಾರಿಯ ವಿವಾಹ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಈ ವರ್ಷದ ಸಾಮೂಹಿಕ ವಿವಾಹ ಸಮಾರಂಭವು 2026ರ ಏಪ್ರಿಲ್ 29ರ ಬುಧವಾರ ಸಂಜೆ ಗಂಟೆ 6.40ಕ್ಕೆ ಸರಿಯಾಗಿ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ನೆರವೇರಲಿದೆ. ಈ ಬಾರಿಯ ವಿಶೇಷವೆಂದರೆ ಒಟ್ಟು 106 ಜೋಡಿಗಳು ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಮದುವೆಯ ಸಂಪೂರ್ಣ ವೆಚ್ಚವನ್ನು ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ನಿರ್ವಹಿಸಲಾಗುತ್ತಿದ್ದು, ಇದು ನಾಡಿನ ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ವರದಾನವಾಗಿ ಪರಿಣಮಿಸಿದೆ.
ಉದ್ಘಾಟನಾ ಸಮಾರಂಭದಲ್ಲಿ ಶ್ರೀನಿವಾಸ ರಾವ್, ರಜಪೂತ, ವಿಕಾಸ್ ಆರಿಗ, ಧರ್ಣಪ್ಪ ಮಾಸ್ಟರ್, ಶ್ರೀಮತಿ ರತ್ನಾವತಿ, ಮೋಹನ್ ಶೆಟ್ಟಿ, ಸಂತೋಷ್ ಹಾಗೂ ಶ್ರೀಮತಿ ಪವಿತ್ರ ಸುನಿಲ್ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ದಶಕಗಳಿಂದ ನಡೆದುಕೊಂಡು ಬರುತ್ತಿರುವ ಈ ಮಹತ್ಕಾರ್ಯವು ಸಾವಿರಾರು ಕುಟುಂಬಗಳಿಗೆ ಆಸರೆಯಾಗುತ್ತಾ ಸಾಗುತ್ತಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಸುದ್ದಿಗಳು, ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು









