ಉಪ್ಪಿನಂಗಡಿ : ಕದಿಕಾರು ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಜರಗುತ್ತಿರುವ ಪಂಚಕಲ್ಯಾಣ ಮಹೋತ್ಸವದ ಅಂಗವಾಗಿ ಶನಿವಾರದಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಹಬ್ಬವೇ ಏರ್ಪಟ್ಟಿತ್ತು. ಭಗವಾನ್ 1008 ಶ್ರೀ ಚಂದ್ರನಾಥ ಸ್ವಾಮಿ ಹಾಗೂ ಮಹಾಮಾತೆ ಶ್ರೀ ಪದ್ಮಾವತಿ ದೇವಿ ಬಿಂಬಗಳ ಪುನರ್ ಪ್ರತಿಷ್ಠೆ ಮತ್ತು ಏಕಶಿಲಾ ಚತುರ್ಮುಖ ಮಾನಸ್ತಂಭದ ಪಂಚಕಲ್ಯಾಣ ಮಹೋತ್ಸವದ ಪ್ರಯುಕ್ತ ನಡೆದ ಈ ಸಂಭ್ರಮದಲ್ಲಿ ಮಂಗಳೂರಿನ ‘ಮಕ್ಕಿಮನೆ ಕಲಾವೃಂದ’ದ ಕಲಾವಿದರು ಪ್ರೇಕ್ಷಕರ ಮನ ಗೆದ್ದರು. ಸುದೇಶ್ ಜೈನ್ ಮಕ್ಕಿಮನೆ ಅವರ ಸಂಯೋಜನೆಯಲ್ಲಿ ಮೂಡಿಬಂದ ವೈವಿಧ್ಯಮಯ ಸಾಂಸ್ಕೃತಿಕ ಪ್ರದರ್ಶನಗಳು ನೆರೆದಿದ್ದ ಭಕ್ತಾದಿಗಳ ಮತ್ತು ಕಲಾಭಿಮಾನಿಗಳ ವಿಶೇಷ ಮೆಚ್ಚುಗೆಗೆ ಪಾತ್ರವಾದವು.
ಈ ಸಾಂಸ್ಕೃತಿಕ ಸಂಜೆಯ ಕಾರ್ಯಕ್ರಮದಲ್ಲಿ ಕದಿಕಾರು ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಸೇವಾ ಟ್ರಸ್ಟ್ನ ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸಮಸ್ತ ಟ್ರಸ್ಟ್ ಸದಸ್ಯರು ಹಾಗೂ ಊರಿನ ಅಪಾರ ಸಂಖ್ಯೆಯ ಕಲಾಭಿಮಾನಿಗಳು ಕಾರ್ಯಕ್ರಮವನ್ನು ವೀಕ್ಷಿಸಿ ಸಂಭ್ರಮಿಸಿದರು. ಆಧ್ಯಾತ್ಮಿಕ ವಾತಾವರಣದ ನಡುವೆ ನಡೆದ ಈ ಕಲಾ ಪ್ರದರ್ಶನವು ಉತ್ಸವಕ್ಕೆ ಮತ್ತಷ್ಟು ಮೆರುಗು ನೀಡಿತು.
ಇಡೀ ಕಾರ್ಯಕ್ರಮವನ್ನು ಪ್ರಮಯಿ ಜೈನ್ ಮೂಡುಬಿದಿರೆ ಅಚ್ಚುಕಟ್ಟಾಗಿ ನಿರೂಪಿಸಿದರು. ಈ ಯಶಸ್ವಿ ಪ್ರದರ್ಶನಕ್ಕೆ ವಿದುಷಿ ನಯನಾ, ಆಶಿಶ್ ಅಂಚನ್, ಧನಂಜಯ್ ಜೈನ್ ವೇಣೂರು ಹಾಗೂ ವಿತೇಶ್ ಜೈನ್ ಪಡಂಗಡಿ ಅವರು ವಿವಿಧ ರೀತಿಯಲ್ಲಿ ಸಹಕರಿಸಿದರು. ಭಕ್ತಿಯ ಜೊತೆಗೆ ಸಾಂಸ್ಕೃತಿಕ ಸೊಗಡನ್ನು ಪಸರಿಸಿದ ಈ ಕಾರ್ಯಕ್ರಮವು ಪಂಚಕಲ್ಯಾಣ ಮಹೋತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿ ಮೂಡಿಬಂದಿತು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









