ಮಂಗಳೂರು: ಆಂಧ್ರಪ್ರದೇಶದ ಗೌರವಾನ್ವಿತ ರಾಜ್ಯಪಾಲರಾದ ನ್ಯಾಯಮೂರ್ತಿ ಅಬ್ದುಲ್ ನಝೀರ್ ಅವರು ಶುಕ್ರವಾರ ಮಂಗಳೂರಿನ ಪಡೀಲ್ನಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಂಕೀರ್ಣ ‘ಪ್ರಜಾಸೌಧ’ಕ್ಕೆ ಭೇಟಿ ನೀಡಿದರು. ಕಚೇರಿಯ ಆವರಣದ ವಿವಿಧ ವಿಭಾಗಗಳನ್ನು ವೀಕ್ಷಿಸಿದ ಅವರು, ಸುಸಜ್ಜಿತವಾಗಿ ನಿರ್ಮಾಣಗೊಂಡಿರುವ ಈ ನೂತನ ಕಟ್ಟಡದ ಶೈಲಿ ಮತ್ತು ಸೌಲಭ್ಯಗಳ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ರಾಜ್ಯಪಾಲರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಈ ಭೇಟಿಯ ಸ್ಮರಣಾರ್ಥವಾಗಿ ಜಿಲ್ಲಾಧಿಕಾರಿಗಳು ರಾಜ್ಯಪಾಲರಿಗೆ ಕರಾವಳಿಯ ಸಾಂಸ್ಕೃತಿಕ ಪರಂಪರೆಯ ಸಂಕೇತವಾದ ಯಕ್ಷಗಾನ ಶೈಲಿಯ ಸುಂದರ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ರಾಜು ಕೆ. ಹಾಗೂ ಜಿಲ್ಲಾಡಳಿತದ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯಪಾಲರ ಭೇಟಿಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಅಧಿಕಾರಿಗಳೊಂದಿಗೆ ಸಂಕ್ಷಿಪ್ತವಾಗಿ ಚರ್ಚಿಸಿದ ರಾಜ್ಯಪಾಲರು ಕಚೇರಿಯ ಕಾರ್ಯವೈಖರಿಯ ಬಗ್ಗೆ ಮಾಹಿತಿ ಪಡೆದುಕೊಂಡರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









