ಚಿತ್ರದುರ್ಗ : ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಹಾಗೂ ಹಿರಿಯೂರು ಕ್ಷೇತ್ರದ ಶಾಸಕ ಡಿ. ಸುಧಾಕರ್ ಅವರು ಅನಾರೋಗ್ಯದ ಕಾರಣ ಮೇ 10ರ ಭಾನುವಾರ ಬೆಳಗಿನ ಜಾವ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹಿರಿಯ ನಾಯಕರ ಅಗಲಿಕೆಗೆ ರಾಜ್ಯ ಸರ್ಕಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಗೌರವಾರ್ಥ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲು ಆದೇಶ ಹೊರಡಿಸಿದೆ.
ಸಚಿವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ರಾಜ್ಯಾದ್ಯಂತ ಅಧಿಕೃತ ಶೋಕಾಚರಣೆಯನ್ನು ಘೋಷಿಸಿದೆ. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನರಂಜನಾ ಕಾರ್ಯಕ್ರಮಗಳು ನಡೆಯುವುದಿಲ್ಲ ಹಾಗೂ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಲು ಸೂಚಿಸಲಾಗಿದೆ. ಇದರೊಂದಿಗೆ, ಸಚಿವರ ತವರು ಜಿಲ್ಲೆಯಾದ ಚಿತ್ರದುರ್ಗಕ್ಕೆ ಅನ್ವಯವಾಗುವಂತೆ ಮೇ 11ರ ಸೋಮವಾರದಂದು ಸಾರ್ವಜನಿಕ ರಜೆಯನ್ನು ಘೋಷಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಈ ರಜೆಯು ಚಿತ್ರದುರ್ಗ ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು, ಅನುದಾನಿತ ಮತ್ತು ಅನುದಾನರಹಿತ ಶಾಲಾ-ಕಾಲೇಜುಗಳು ಹಾಗೂ ಸರ್ಕಾರಿ ಸ್ವಾಮ್ಯದ ಅಂಗಸಂಸ್ಥೆಗಳಿಗೆ ಅನ್ವಯವಾಗಲಿದೆ. ಜಿಲ್ಲೆಯಾದ್ಯಂತ ಶೋಕದ ವಾತಾವರಣವಿದ್ದು, ಸಚಿವರ ನಿಧನಕ್ಕೆ ವಿವಿಧ ಗಣ್ಯರು ಕಂಬನಿ ಮಿಡಿದಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ರಾಜ್ಯ ಸುದ್ದಿಗಳು, ಸುದ್ದಿಗಳು









