ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಉರ್ವ ಎಸ್.ಸಿ.ಎಸ್.ಪ್ರಥಮ ದರ್ಜೆ ಕಾಲೇಜ್ ಸಹಯೋಗದಲ್ಲಿ ನಡೆದ ತುಳು ನಾಟಕ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಹಾಗೂ ನಾಟಕ ಪ್ರದರ್ಶನ ಕಾರ್ಯಕ್ರಮ ಬುಧವಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿದ ನಟ ಸಾಯಿ ಚೇತನ್ ಮಾತನಾಡಿ, ರಂಗಭೂಮಿಯ ಕಲಿಕೆ ನಿರಂತರವಾಗಿದ್ದು, ಸದಾ ಹೊಸತನದ ಅನ್ವೇಷಣೆ ನಡೆಯುತ್ತಿರುತ್ತದೆ, ವಿದ್ಯಾರ್ಥಿಗಳಿಗೆ ತುಳು ನಾಟಕ ತರಬೇತಿ ಕೈಗೊಂಡ ತುಳು ಸಾಹಿತ್ಯ ಅಕಾಡೆಮಿಯ ಕಾರ್ಯ ಶ್ಲಾಘನೀಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಮಾತನಾಡಿ, ಕಾಲೇಜಿನಲ್ಲಿ ರಂಗಾಭ್ಯಾಸ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಯೋಚನೆ ಮೂಲಕ ಪಠ್ಯ ಅಧ್ಯಯನಕ್ಕೂ ಪೂರಕವಾಗುತ್ತದೆ ಎಂದರು.
ತರಬೇತಿ ಕಾರ್ಯಾಗಾರದ ನಿರ್ದೇಶಕರಾದ ಯೋಗೀಶ್ ಶೆಟ್ಟಿ, ರಂಗ ನಿರ್ದೇಶಕ ಜಗನ್ ಪವಾರ್, ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಸುಚಿತ್ರಾ ಪಿ.ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಿತೇಶ್ ಪೂಜಾರಿ ಹಾಗೂ ಶಶಾಂಕ್ ನಾಟಕ ಕಾರ್ಯಗಾರದ ಅನುಭವ ಹಂಚಿಕೊಂಡರು.
ಪ್ರಾಂಶುಪಾಲ ಹಾರ್ದಿಕ್ ಪಿ.ಚೌಹಾಣ್ ಸ್ವಾಗತಿಸಿದರು. ವಿದ್ಯಾರ್ಥಿನಿ ಮೇಘ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ತುಳು ಸಂಘದ ಸಂಚಾಲಕಿ ದೀಕ್ಷಿತಾ ವಂದಿಸಿದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಟಾಪ್ ಸುದ್ದಿ, ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









