ಮಂಗಳೂರು : ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರಿಗೆ ಮಂಗಳೂರು ಸಮೀಪದ ಪರೆಂಗಿಪೇಟೆಯಿಂದ ಸರಣಿ ಜೀವ ಬೆದರಿಕೆ ಕರೆಗಳು ಬಂದಿರುವುದು ತೀವ್ರ ಸಂಚಲನ ಮೂಡಿಸಿದೆ. ಮೊದಲು ಮೊಹಮ್ಮದ್ (9187399207) ಎಂಬಾತನಿಂದ ಕರೆ ಬಂದಿದ್ದು, ಆ ಬೆನ್ನಲ್ಲೇ ಉಮರ್ (8123359613) ಎಂಬ ವ್ಯಕ್ತಿ ನೇರವಾಗಿ ಕರೆ ಮಾಡಿ ಮಂಗಳೂರಿಗೆ ಬರುವಂತೆ ಮುಖಾಮುಖಿ ಸವಾಲು ಹಾಕಿದ್ದಾನೆ. ಈ ಇಬ್ಬರೂ ಕೊಲೆ ಬೆದರಿಕೆ ಒಡ್ಡಿರುವ ಆಡಿಯೋ ಸಂಭಾಷಣೆಯ ದಾಖಲೆಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಗೊಂಡಿವೆ.
ಈ ಘಟನೆಯನ್ನು ಖಂಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶದ ಪೋಸ್ಟ್ಗಳು ಹರಿದಾಡುತ್ತಿದ್ದು, ಬಹಿರಂಗವಾಗಿ ಸವಾಲು ಹಾಗೂ ಜೀವ ಬೆದರಿಕೆ ಹಾಕಿರುವ ಕಿಡಿಗೇಡಿಗಳ ವಿರುದ್ಧ ಪೊಲೀಸ್ ಇಲಾಖೆ ತಕ್ಷಣವೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ. ಒಂದು ವೇಳೆ ಆರೋಪಿಗಳನ್ನು ಬಂಧಿಸದೆ ನಿರ್ಲಕ್ಷ್ಯ ವಹಿಸಿದರೆ, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇರುವ ಎಲ್ಲಾ ಹಿಂದೂ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಬೃಹತ್ ‘ಮಂಗಳೂರು ಚಲೋ’ ಪ್ರತಿಭಟನಾ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ವಿಡಿಯೋ
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









