ಬಂಟ್ವಾಳ : ಪಾಣೆಮಂಗಳೂರು ಸಮೀಪದ ಶಂಭೂರಿನಲ್ಲಿ ಇಲಾಖಾ ಕೆಲಸದಲ್ಲಿ ನಿರತರಾಗಿದ್ದಾಗಲೇ ಮೆಸ್ಕಾಂ ಸಿಬ್ಬಂದಿಯೊಬ್ಬರು ಅಕಸ್ಮಾತ್ ಆಗಿ ಕೊನೆಯುಸಿರೆಳೆದಿದ್ದಾರೆ. ಪಾಣೆಮಂಗಳೂರು ಶಾಖೆಯ ಸಹಾಯಕ ಮೆಕಾನಿಕ್ ಆಗಿ ಸೇವೆ ಸಲ್ಲಿಸುತ್ತಿದ್ದ ಮಿತ್ತೂರು ಮೂಲದ ಚಂದ್ರಶೇಖರ ನಾಯ್ಕ (55) ಅವರೇ ದುರಂತ ಅಂತ್ಯ ಕಂಡ ದುರ್ದೈವಿ. ಬುಧವಾರ ಮಧ್ಯಾಹ್ನ ಶಂಭೂರಿನ ಕುಂದಾಯಗೋಳಿ ಎಂಬಲ್ಲಿ ಮುರಿದು ಬಿದ್ದಿದ್ದ ವಿದ್ಯುತ್ ಕಂಬವನ್ನು ದುರಸ್ತಿಗೊಳಿಸಿ, ತಂತಿ ಎಳೆದು ಸಾರ್ವಜನಿಕರಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಜವಾಬ್ದಾರಿಯನ್ನು ಅವರು ಯಶಸ್ವಿಯಾಗಿ ಮುಗಿಸಿದ್ದರು.
ಈ ಕಠಿಣ ಕೆಲಸ ಮುಗಿದ ಬೆನ್ನಲ್ಲೇ ಮತ್ತೊಂದು ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಲು ಸಹೋದ್ಯೋಗಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ, ಕುಂದಾಯಗೋಳಿ ಮಾರ್ಗ ಮಧ್ಯೆ ಚಂದ್ರಶೇಖರ್ ಅವರು ಇದ್ದಕ್ಕಿದ್ದಂತೆ ಬೈಕಿನಿಂದ ಕೆಳಗೆ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ಹೃದಯಾಘಾತದ ಕಾರಣದಿಂದಾಗಿ ಅವರು ಆಸ್ಪತ್ರೆ ತಲುಪುವಷ್ಟರಲ್ಲೇ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ದುಖಾಂತ ಸುದ್ದಿಗಳು, ಸುದ್ದಿಗಳು









