ಮಂಗಳೂರು : ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಆಡಳಿತವು 12 ವರ್ಷಗಳ ಯಶಸ್ವಿ ಅವಧಿಯನ್ನು ಪೂರೈಸಿದೆ. ಈ ಹಿನ್ನೆಲೆಯಲ್ಲಿ ವಿಶ್ವಾಸ, ವಿಕಾಸ ಮತ್ತು ಜನಕಲ್ಯಾಣದ ಧ್ಯೇಯದೊಂದಿಗೆ ಮಂಗಳೂರು ನಗರ ದಕ್ಷಿಣ ಮಂಡಲದಲ್ಲಿ ವಿಶೇಷ ಜನಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಭಾಗವಾಗಿ ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕರಾದ ವೇದವ್ಯಾಸ ಕಾಮತ್ ಅವರು ಒಟ್ಟಾಗಿ ಪಾಂಡೇಶ್ವರದ ಶಿವನಗರದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ಕೊರಗ ತನಿಯ ಸನ್ನಿಧಿಗೆ ಭೇಟಿ ನೀಡಿದರು.
ದೈವಸ್ಥಾನಕ್ಕೆ ಭೇಟಿ ನೀಡಿದ ಜನಪ್ರತಿನಿಧಿಗಳು ವಿಶೇಷ ಪ್ರಾರ್ಥನೆ ಸಲ್ಲಿಸಿ, ಸಾರ್ವಜನಿಕರ ಹಿತರಕ್ಷಣೆ ಹಾಗೂ ಸಮಾಜದ ಕಲ್ಯಾಣಕ್ಕಾಗಿ ಸಂಕಲ್ಪ ಮಾಡಿದರು. ಪ್ರಧಾನಿ ಮೋದಿ ಅವರ ಸುದೀರ್ಘ ಹಾಗೂ ಯಶಸ್ವಿ ಆಡಳಿತದ ಸಾಧನೆಗಳನ್ನು ಜನಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಈ ಜನಸಂಪರ್ಕ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಸ್ಥಳೀಯ ಪ್ರಮುಖರು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಸುದ್ದಿಗಳು









