ಮಂಗಳೂರು : ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಕುಡಿಯುವ ನೀರಿನ ಬಿಲ್ಲು ಪಾವತಿಯ ಸ್ಕ್ಯಾನರ್ ವ್ಯವಸ್ಥೆಯನ್ನು ಬಿಡುಗಡೆಗೊಳಿಸಲಾಯಿತು.
ಡಿಜಿಟಲ್ ಪಾವತಿ ವ್ಯವಸ್ಥೆಗೆ ಪಟ್ಟಣ ಪಂಚಾಯತ್ ಅಧ್ಯಕ್ಷೆ ದಿವ್ಯ ಸತೀಶ್ ಶೆಟ್ಟಿ ಚಾಲನೆ ನೀಡಿದರು.
ಈ ವ್ಯವಸ್ಥೆಯ ಮೂಲಕ ನಾಗರೀಕರು ತಮ್ಮ ನೀರಿನ ಬಿಲ್ಲನ್ನು ಸ್ಕ್ಯಾನ್ ಮಾಡಿ ಸುಲಭವಾಗಿ ಪಾವತಿಸಬಹುದು. ಇದರಿಂದ ಬಿಲ್ಲು ಪಾವತಿ ಪ್ರಕ್ರಿಯೆಯನ್ನು ಡಿಜಿಟಲೀಕರಣ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಪಟ್ಟಣ ಪಂಚಾಯತ್ ಕೈಗೊಂಡ ಮಹತ್ವದ ಹೆಜ್ಜೆಯಾಗಿದೆ, ಸಾರ್ವಜನಿಕರು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬಹುದು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಪ್ರವೀಣ್ ಐ. ಬಗಂಬಿಲ ಮತ್ತಿತರರು ಉಪಸ್ಥಿತರಿದ್ದರು.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









