ಮಂಗಳೂರು : ಮಂಗಳೂರಿನ ‘ಕಂದುಕ ಫ್ರೆಂಡ್ಸ್ ಸರ್ಕಲ್’ ವತಿಯಿಂದ ಹಿಂದೂ ಮುಖಂಡ ಶರಣ್ ಪಂಪ್ವೆಲ್ ಅವರ ಜನ್ಮದಿನವನ್ನು ಸಮಾಜಸೇವೆಯ ಮೂಲಕ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ವಿಶೇಷ ದಿನದ ಅಂಗವಾಗಿ ಕಂದುಕದ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅವಶ್ಯಕವಾದ ಪಠ್ಯಪುಸ್ತಕಗಳು, ಕೊಡೆಗಳು ಹಾಗೂ ಬ್ಯಾಗ್ಗಳನ್ನು ವಿತರಿಸಿ, ಮಕ್ಕಳ ಶೈಕ್ಷಣಿಕ ಅಗತ್ಯಕ್ಕೆ ನೆರವು ನೀಡಲಾಯಿತು.
ಶಾಲಾ ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಶೋಭಾ ಶೆಟ್ಟಿ, ಶರಣ್ ಪಂಪ್ವೆಲ್, ದೀಪಕ್, ಶಿಬಿನ್, ಬಾಲು, ಪ್ರಮೋದ್ ಹಾಗೂ ವಿಜಯ್ ಕುಮಾರ್ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಂತರ ನೆರೆದಿದ್ದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಗಳನ್ನು ಹಂಚಿ, ಹುಟ್ಟುಹಬ್ಬದ ಸಂತಸವನ್ನು ಹಂಚಿಕೊಳ್ಳಲಾಯಿತು. ಸಮಾರಂಭದಲ್ಲಿ ಭಾಗವಹಿಸಿದ್ದ ಅತಿಥಿಗಳು ಮಕ್ಕಳೊಂದಿಗೆ ಬೆರೆತು ಶುಭ ಹಾರೈಸಿದರು.
ಕೇವಲ ಶಾಲಾ ಮಕ್ಕಳಿಗೆ ನೆರವು ನೀಡುವುದಷ್ಟೇ ಅಲ್ಲದೆ, ಸಾಮಾಜಿಕ ಬದ್ಧತೆಯನ್ನು ಮೆರೆದ ಕಾರ್ಯಕರ್ತರು ನಗರದ ವೆನ್ಲಾಕ್ ಆಸ್ಪತ್ರೆಗೂ ಭೇಟಿ ನೀಡಿದರು. ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಮಾನವೀಯತೆಯನ್ನು ಮೆರೆದರು. ಸಮಾಜಸೇವೆಯ ಮೂಲಕ ನಾಯಕನ ಹುಟ್ಟುಹಬ್ಬವನ್ನು ಆಚರಿಸಿದ ಕಂದುಕ ಫ್ರೆಂಡ್ಸ್ ಸರ್ಕಲ್ನ ಈ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ.
ಪ್ರತಿಕ್ರಿಯೆ ನೀಡಿ
ಪ್ರತಿಕ್ರಿಯೆ ನೀಡಿ
Posted in: ಪ್ರಾದೇಶಿಕ ಸುದ್ದಿಗಳು, ಟಾಪ್ ಸುದ್ದಿ, ಸುದ್ದಿಗಳು









